ನವದೆಹಲಿ: ಎನ್‌ಡಿಎಗೆ ಬೆಂಬಲ ನೀಡಿದ ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಂದ್ರ ಬಜೆಟ್‌ನಲ್ಲಿ ಬಂಪರ್ ಘೋಷಣೆ ಮಾಡಲಾಗಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರನೇ ಅವಧಿಗೆ ಜಾರಿಗೆ ಬರಲು ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರದ ಪಾತ್ರ ಪ್ರಮುಖವಾಗಿದೆ.
ಈ ಹಿನ್ನೆಲೆಯಲ್ಲಿ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಕೇಂದ್ರ ಬಜೆಟ್‌ನಲ್ಲಿ ಬಂಪರ್ ಆಫರ್ ಘೋಷಣೆ ಮಾಡಲಾಗಿದ್ದು, ಬಿಹಾರಕ್ಕೆ ಎಕ್ಸ್‌ಪ್ರೆಸ್ ರಸ್ತೆ ಯೋಜನೆ ಘೋಷಣೆ ಮಾಡಲಾಗಿದೆ.
ಇದರ ಜೊತೆಗೆ ಬಿಹಾರಕ್ಕೆ ಹೊಸ ಏರ್‌ಪೋರ್ಟ್ ಮತ್ತು ಮೆಡಿಕಲ್ ಕಾಲೇಜನ್ನು ಘೋಷಣೆ ಮಾಡಲಾಗಿದ್ದು, ಅಮೃತ್‌ಸರ್-ಗಯಾ ಆರ್ಥಿಕ ಕಾರಿಡಾರ್ ಕೂಡ ಘೋಷಣೆ ಮಾಡಲಾಗಿದೆ.
ಇನ್ನು ಆಂಧ್ರಪ್ರದೇಶಕ್ಕೆ 1500 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶದ ಪುನರ್ ನಿರ್ಮಾಣಕ್ಕೆ ಎಲ್ಲಾ ರೀತಿಯ ಬೆಂಬಲ ಘೋಷಿಸಲಾಗಿದೆ.
ಇನ್ನು ನೀರು ಮತ್ತು ವಿದ್ಯುತ್ ಯೋಜನೆಗಳಲ್ಲಿ ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನ ನೀಡಲಾಗಿದ್ದು, ಮಿತ್ರಕೂಟಗಳಿಗೆ ಮೋದಿ ಸರ್ಕಾರ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…