ದೇಶ- ವಿದೇಶ

ವಯನಾಡು ಭೂಕುಸಿತ ತೀವ್ರ ಸ್ವರೂಪದ ವಿಪತ್ತು: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

ನವದೆಹಲಿ: ಕೇರಳದ ವಯನಾಡು ಭೂಕುಸಿತ ದುರಂತವನ್ನು ಕೇಂದ್ರ ಸರ್ಕಾರ ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡು ಭೂಕುಸಿತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಣೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಸ್ವಾಗತಿಸಿದ್ದು, ಇದು ಪುನರ್ವಸತಿಗೆ ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ವಯನಾಡು ಭೂಕುಸಿತ ದುರಂತವನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಣೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದು ಪುನರ್ವಸತಿಯನ್ನು ಎದುರು ನೋಡುತ್ತಿರುವ ನಿರಾಶ್ರಿತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಯಾಗಿದೆ. ಅದಕ್ಕಾಗಿ ಅಗತ್ಯವಿರುವ ಹಣವನ್ನು ಆದಷ್ಟು ಬೇಗ ಮಂಜೂರು ಮಾಡಬೇಕು. ಅದಕ್ಕಾಗಿ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಕೇರಳದ ವಯನಾಡಿನಲ್ಲಿ ಕಳೆದ ಜುಲೈನಲ್ಲಿ ಅತ್ಯಂತ ಭೀಕರ ಭೂಕುಸಿತ ಸಂಭವಿಸಿತ್ತು. ನಾಲ್ಕು ಗ್ರಾಮಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದವು.

ಘಟನೆಯಲ್ಲಿ 231 ಮಂದಿ ಸಾವನ್ನಪ್ಪಿದ್ದು, 47 ಮಂದಿ ನಾಪತ್ತೆಯಾಗಿದ್ದಾರೆ. 145 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, 170 ಮನೆಗಳು ಭಾಗಶಃ ನಾಶವಾಗಿದೆ.

ಕೇರಳ ಸಿಎಂ ಪಿಣರಾಯಿ ವಿಜಯನ್‌ ಮನವಿ ಮಾಡಿದ ಐದು ತಿಂಗಳ ನಂತರ ಕೇಂದ್ರ ಸರ್ಕಾರದಿಂದ ಈ ಘೋಷಣೆ ಹೊರಬಿದ್ದಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago