ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.
ಈ ತರಗತಿಗಳ ಪರೀಕ್ಷೆ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದು, ಇನ್ನು ಮುಂದೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್ ಆದರೆ ಅದೇ ತರಗತಿಯಲ್ಲೇ ಓದಬೇಕಾಗುತ್ತದೆ.
ಕೇಂದ್ರ ಸರ್ಕಾರವು ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಕಾಯ್ದೆ ನಿಯಮಗಳು-2010ಕ್ಕೆ ತಿದ್ದುಪಡಿ ಮಾಡಿದೆ.
ಈ ಹೊಸ ನಿಯಮಗಳ ಪ್ರಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಿದೆ.
ಈ ಮೂಲಕ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಫೇಲ್ ಆದರೆ ಅವರ ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ.
ಈ ಕಾಯ್ದೆಯ ಪ್ರಕಾರ ಐದು ಹಾಗೂ ಎಂಟನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್ ಆದರೆ ಫಲಿತಾಂಶ ಪ್ರಕಟವಾದ ಎರಡು ತಿಂಗಳ ಒಳಗಡೆ ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾಗುತ್ತದೆ. ಆ ಪರೀಕ್ಷೆಯಲ್ಲೂ ಫೇಲ್ ಆದರೆ ಆ ವಿದ್ಯಾರ್ಥಿ ಅದೇ ತರಗತಿಯಲ್ಲೇ ಓದಬೇಕಾಗುತ್ತದೆ ಎಂದು ಹೇಳಿದೆ.
ಈ ಅಧಿಸೂಚನೆಯು ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯ ಮತ್ತು ಸೈನಿಕ ಶಾಲೆಗಳು ಸೇರಿದಂತೆ ಕೇಂದ್ರ ಸರ್ಕಾರವು ನಡೆಸುತ್ತಿರುವ 3000ಕ್ಕೂ ಹೆಚ್ಚಿನ ಶಾಲೆಗಳಿಗೆ ಅನ್ವಯವಾಗುತ್ತದೆ.
ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಿಗ್ಗೆ 11…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…