ನವದೆಹಲಿ: ಕೇಂದ್ರ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ವೇರಿಯೆಬಲ್ ಡಿಯರ್ನೆಸ್ ಅಲೋವೆನ್ಸ್ ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ ಮಾಡಿದ್ದು, ಅಕ್ಟೋಬರ್.1 ರಿಂದ ಜಾರಿಗೆ ಬರಲಿದೆ.
ಇದರಿಂದ ಕಾರ್ಮಿಕರಿಗೆ ವಿಶೇಷವಾಗಿ ಅಸಂಘಟಿತ ವಲಯದಲ್ಲಿರುವವರಿಗೆ ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ.
ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್ ಮತ್ತು ಅನ್‌ಲೋಡಿಂಗ್, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ.
ಕೌಶಲ್ಯ ಮಟ್ಟಕ್ಕೆ ಅನುಗುಣವಾಗಿ ಕನಿಷ್ಠ ವೇತನ ದರ ಹೆಚ್ಚಿಸಲಾಗಿದೆ. ಕೌಶಲ್ಯರಹಿರ ಅರೆ-ಕುಶಲ, ಕೌಶಲ್ಯ ಮತ್ತು ಹೆಚ್ಚು ನುರಿತ ಮತ್ತು ಇಯತರೇ ವರ್ಗಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿ ವೇತನ ಹೆಚ್ಚಳ ಮಾಡಲಾಗಿದೆ.