Mysore
23
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ: 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ ನೀಡಿದೆ.

ಈಗಾಗಲೇ ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರವು ಈಗ ಐದು ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯನ್ನು ಹೆಚ್ಚಳ ಮಾಡಿದೆ.

ಎಲ್ಲಾ ಏಜೆನ್ಸಿಗಳಲ್ಲೂ ಐದು ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗಳು ಲಭ್ಯವಿದೆ. ಸೂಕ್ತ ಗುರುತಿನ ಚೀಟಿ ತೋರಿಸಿ ಗ್ರಾಹಕರು ಸಿಲಿಂಡರ್‌ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಮಾಹಿತಿಯ ಪ್ರಕಾರ ಕಳೆದ ಮಾರ್ಚ್.‌23ರಿಂದ ದೇಶದಲ್ಲಿ ಸುಮಾರು 6.6 ಲಕ್ಷ ಸಿಲಿಂಡರ್‌ಗಳು ಮಾರಾಟವಾಗಿವೆ. ಸದ್ಯ ಈ ಸಣ್ಣ ಸಿಲಿಂಡರ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಜನ ಸೂಕ್ತ ದಾಖಲಾತಿ ನೀಡಿ ಗ್ಯಾಸ್‌ ಏಜೆನ್ಸಿಗಳಿಂದ ಖರೀದಿಸಬಹುದು ಎಂದು ಪೆಟ್ರೋಲಿಯಂ ಸಚಿವಾಲಯ ಹೇಳಿದೆ.

 

Tags:
error: Content is protected !!