ನವದೆಹಲಿ: ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಾಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚನೆ ನೀಡಿದೆ.
ಸಚಿವಾಲಯಗಳ ಕೆಳಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ವಲಯದ ಉದ್ಯಮಗಳು, ಬ್ಯಾಂಕ್, ಸ್ವಾಯತ್ತ ಹಾಗೂ ಶಾಸನಬದ್ಧ ಸಂಸ್ಥೆಗಳಿಗೆ ನೌಕರರ ಕಾರ್ಯಕ್ಷಮತೆಯನ್ನು ಪರಿಶೀಲಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರ್ದೇಶಿಸಿದೆ.
ಸರ್ಕಾರಿ ನೌಕರರ ಕೆಲಸವನ್ನು ಪರಿಶೀಲಿಸಿ ಅವರನ್ನು ಉಳಿಸಿಕೊಳ್ಳಬೇಕೆ ಅಥವಾ ಕೆಲಸದಿಂದ ತೆಗೆದುಹಾಕಬೇಕು ಎಂಬುದನ್ನು ನಿರ್ಧರಿಸಲು ಕಾರ್ಯಕ್ಷಮತೆಯ ಆವರ್ತ ಪರಿಶೀಲನೆ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ನಿಟ್ಟಿನಲ್ಲಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಿ ವರದಿಯನ್ನು ಸಲ್ಲಿಸಲು ವಿನಂತಿಸಿದರೂ ಸರ್ಕಾರದ ನಿರ್ದೇಶನಗಳನ್ನು ಪಾಲಿಸದಿರುವ ಬಗ್ಗೆ ಕೇಂದ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಿ, ಬೇರೆ ನೌಕರರನ್ನು ತೆಗೆದುಕೊಳ್ಳುವಂತೆ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…