ದೇಶ- ವಿದೇಶ

ಖಮೇನಿ ಹತ್ಯೆ ಬಳಿಕ ಕೇಂದ್ರ ಸರ್ಕಾರ ಮೌನವಹಿಸಿದೆ: ಸೋನಿಯಾ ಗಾಂಧಿ ಆಕ್ರೋಶ

ನವದೆಹಲಿ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಕೇಂದ್ರ ಸರ್ಕಾರ ಮೌನವಾಗಿರುವುದಕ್ಕೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

ಅಂತರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾದಾಗ ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮೌನವಾಗಿರುವುದು ತಟಸ್ಥ ನಿಲುವಲ್ಲ, ಬದಲಾಗಿ ಅದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪರಾತ್ಯಾಗ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುದು ತಟಸ್ಥವಲ್ಲ, ಬದಲಾಗಿ ಪರಾತ್ಯಾಗ ಎಂದು ಟಾಂಗ್ ಕೊಟ್ಟಿದ್ದಾರೆ. ಇರಾನ್ ಭಾರತದ ಸಹಾಯಕ್ಕೆ ಬಂದ ಹಲವಾರು ಸಂದರ್ಭಗಳನ್ನು ನರೇಂದ್ರ ಮೋದಿ ಸರ್ಕಾರಕ್ಕೆ ಸೋನಿಯಾ ಗಾಂಧಿ ನೆನಪಿಸಿದ್ದಾರೆ. ಖಮೇನಿಯವರ ಸಾವಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಯಮ ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡಿದೆ.

ಮಾರ್ಚ್.1ರಂದು, ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಹೊಸೇನಿ ಖಮೇನಿ ಅವರನ್ನು ಅಮೆರಿಕ ಮತ್ತು ಇಸ್ರೇಲ್ ಹಿಂದಿನ ದಿನ ನಡೆಸಿದ ಗುರಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ದೃಢಪಡಿಸಿತು. ನಡೆಯುತ್ತಿರುವ ಮಾತುಕತೆಗಳ ಮಧ್ಯೆ ಹಾಲಿ ರಾಷ್ಟ್ರದ ಮುಖ್ಯಸ್ಥರ ಹತ್ಯೆಯು ಸಮಕಾಲೀನ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಗಂಭೀರ ಬಿರುಕು ಮೂಡಿಸುತ್ತದೆ. ಭಾರತದ ಮೌನವು ಅಷ್ಟೇ ಸ್ಪಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಖಮೇನಿಯವರ ಸಾವಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ.ಆದರೆ, ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಯಮ ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡಿದೆ.

ಭಾರತ ಮತ್ತು ಇರಾನ್ ನಡುವಿನ ನಾಗರಿಕ ಹಾಗೂ ಕಾರ್ಯತಂತ್ರದ ಸಂಬಂಧಗಳನ್ನು ನೆನಪಿಸಿದ್ದಾರೆ. ವಿಶೇಷವಾಗಿ 1994ರಲ್ಲಿ ಕಾಶ್ಮೀರ ವಿಷಯದಲ್ಲಿ ಇರಾನ್ ಭಾರತಕ್ಕೆ ನೀಡಿದ ಬೆಂಬಲವನ್ನು ಅವರು ಉಲ್ಲೇಖಿಸಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಬೆಂಬಲಿತ ನಿರ್ಣಯ ಮಂಡನೆಯಾಗದಂತೆ ತಡೆಯುವಲ್ಲಿ ಟೆಹ್ರಾನ್ ಮಹತ್ವದ ಪಾತ್ರ ವಹಿಸಿತ್ತು. ಆ ನಿರ್ಣಾಯಕ ಘಟ್ಟದಲ್ಲಿ ಇರಾನ್ ಭಾರತದ ಪರ ನಿಲ್ಲದಿದ್ದರೆ ಕಾಶ್ಮೀರ ಸಮಸ್ಯೆ ಅಂತರಾಷ್ಟ್ರೀಯ ಮಟ್ಟದಲ್ಲಿ ನಮಗೆ ಹಿನ್ನಡೆ ತರುತ್ತಿತ್ತು ಎಂದು ಅವರು ಬರೆದಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago