ಹೊಸದಿಲ್ಲಿ: ಸಾಂವಿಧಾನಿಕವಾಗಿರುವ ಕೊಲಿಜಿಯಂ ಶಿಫಾರಸ್ಸುಗಳ ಮಹತ್ವವನ್ನು ಸುಪ್ರೀಂಕೋರ್ಟ್ ದೃಢಪಡಿಸಿದ ನಂತರ ಕೇಂದ್ರ ಸರ್ಕಾರ ಶನಿವಾರ(ಸೆ.20) ಎಂಟು ಹೈಕೋರ್ಟ್ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಗೆ ಒಪ್ಪಿಗೆ ಸೂಚಿಸಿದೆ.
ಸುಪ್ರೀಂಕೋರ್ಟ್ ಅಟಾರ್ನಿ ಜನರಲ್ ಅವರಿಗೆ ಸಂವಿಧಾನದಲ್ಲಿ ಕೊಲಿಜಿಯಂ ಶಿಫಾರಸ್ಸುಗಳು ಕೇವಲ ಸಲಹೆಗಳು ಮಾತ್ರವಲ್ಲ. ಅವುಗಳಿಗೆ ಸಾಂವಿಧಾನಿಕ ಬದ್ಧತೆ ಇದೆ ಎಂದು ಮನವರಿಕೆ ಮಾಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆಗೆ ತೀರ್ಮಾನಿಸಿದೆ.
ನ್ಯಾಯಾಂಗ ನೇಮಕಾತಿಗೆ ಸಂಬಂಧಿಸಿದಂತೆ ನ್ಯಾಯಾಂಗ ಹಾಗೂ ಕಾರ್ಯಾಂಗದ ನಡುವೆ ಇರುವ ಸಂಘರ್ಷಗಳು ಹೆಚ್ಚುತ್ತಿರುವ ಮಧ್ಯೆಯೇ ನೇಮಕಾತಿ ಪ್ರಕ್ರಿಯೆಗೆ ನಿರ್ಧಿಸಿರುವುದು ಮಹತ್ವದ ಅಂಶವಾಗಿದೆ. ರಾಜ್ಯಗಳ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿ ವಿಷಯದಲ್ಲಿ ದೆಹಲಿ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿರುವ ಮನಮೋಹನ್ ಅವರನ್ನೇ ಮುಂದೆ ನ್ಯಾಯಾಧೀಶರಾಗಿ ಮುಂದುವರೆಯುವಂತೆ ಸೂಚಿಸಿದೆ.
ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ರಾಜೀವ್ ಶಕ್ದೇರ್ ಅವರನ್ನು ಹಿಮಾಚಲ ಪ್ರದೇಶದ ನ್ಯಾಯಾಮೂರ್ತಿಗಳಾಗಿ ನೇಮಿಸಿದ್ದು, ಇದೇ ಕೋರ್ಟ್‌ನ ಇನ್ನೊಬ್ಬ ನ್ಯಾಯಾಧೀಶ ಸುರೇಶ್ ಕುಮಾರ್ ಕೈತ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ, ಕೊಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ ಇಂದ್ರಪ್ರಸನ್ನ ಮುಖರ್ಜಿ ಅವರನ್ನು ಮೇಘಾಲಯ ಹೈಕೋರ್ಟ್ ನ್ಯಾಯಾಧೀಶರನ್ನಾಗಿ, ಮುಂಬೈ ಹೈಕೋರ್ಟ್‌ನ ನ್ಯಾಯಮೂರ್ತಿ ನಿತಿನ್ ಮಧೂಕರ್ ಜಮಾದಾರ್ ಅವರನ್ನು ಕೇರಳ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ಮಾಡಿದೆ.
ಮುಂಬೈ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ.ಆರ್.ಶ್ರೀರಾಮ್ ಅವರನ್ನು ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದೆ. ಹಿಮಾಚಲ ಪ್ರದೇಶದ ಸಿಜೆ ಆಗಿರುವ ಎಂ.ಎಸ್.ರಾಮಚಂದ್ರರಾವ್ ಅವರನ್ನು ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಕಗೊಳಿಸಿದೆ. ಅಲ್ಲದೆ ಕೇಂದ್ರಡಾಳಿತ ಪ್ರದೇಶಗಳಾದ ಜಮ್ಮುಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್‌ನ ನ್ಯಾಯಮೂರ್ತಿಯನ್ನಾಗಿ ತಶಿ ರಬ್ ಸ್ತನ್ ಅವರೇ ಈ ಕೋರ್ಟ್‌ಗಳ ಮುಖ್ಯ ನ್ಯಾಯಾಧೀಶರಾಗಿ ಮುಂದುವರೆಯಲಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…