Mysore
19
overcast clouds
Light
Dark

ಶೀಘ್ರದಲ್ಲೇ ಜನಗಣತಿ ಆರಂಭ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ ಎಂದು ಮಾಹಿತಿ ನೀಡಿದರು.

1881 ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತಿದ್ದು, ಅದರಂತೆ 2020ರ ಏಪ್ರಿಲ್‌.1ರಂದೇ ಜನಗಣತಿ ಆರಂಭವಾಗಬೇಕಿತ್ತು. ಆದರೆ ಕೋವಿಡ್‌ ಕಾರಣದಿಂದ ಜನಗಣತಿಯನ್ನು ಮುಂದೂಡಿಕೆ ಮಾಡಲಾಗಿತ್ತು.

ಮನೆ ಮನೆಗಳಿಗೆ ತೆರಳಿ ಜನಗಣತಿಯ ಫಾರ್ಮ್‌ ಭರ್ತಿ ಮಾಡಿ, ಸ್ವ ಸಮೀಕ್ಷೆಗೂ ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಇದಕ್ಕಾಗಿಯೇ ಫೋರ್ಟಲ್‌ ಲಭ್ಯವಾಗಲಿದೆ.

ಅಲ್ಲಿ ಮಾಹಿತಿ ತುಂಬುವವರು ಆಧಾರ್‌ ಸಂಖ್ಯೆ ಅಥವಾ ಮೊಬೈಲ್‌ ಫೋನ್‌ ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು, ಅಶ್ವಿನಿ ವೈಷ್ಣವ್‌ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜಾತಿಗಣತಿ ಬಗ್ಗೆ ಮಾಹಿತಿ ರವಾನಿಸಿದ್ದಾರೆ.