ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ ಎಂದು ಮಾಹಿತಿ ನೀಡಿದರು.
1881 ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತಿದ್ದು, ಅದರಂತೆ 2020ರ ಏಪ್ರಿಲ್.1ರಂದೇ ಜನಗಣತಿ ಆರಂಭವಾಗಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ಜನಗಣತಿಯನ್ನು ಮುಂದೂಡಿಕೆ ಮಾಡಲಾಗಿತ್ತು.
ಮನೆ ಮನೆಗಳಿಗೆ ತೆರಳಿ ಜನಗಣತಿಯ ಫಾರ್ಮ್ ಭರ್ತಿ ಮಾಡಿ, ಸ್ವ ಸಮೀಕ್ಷೆಗೂ ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಇದಕ್ಕಾಗಿಯೇ ಫೋರ್ಟಲ್ ಲಭ್ಯವಾಗಲಿದೆ.
ಅಲ್ಲಿ ಮಾಹಿತಿ ತುಂಬುವವರು ಆಧಾರ್ ಸಂಖ್ಯೆ ಅಥವಾ ಮೊಬೈಲ್ ಫೋನ್ ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು, ಅಶ್ವಿನಿ ವೈಷ್ಣವ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜಾತಿಗಣತಿ ಬಗ್ಗೆ ಮಾಹಿತಿ ರವಾನಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…