ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ! ಇಂದು ಟಾಂಗ್ ನೀಡಿದ್ದಾರೆ.
ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ.
ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…