ನವದೆಹಲಿ: ದಾಖಲೆ ಕೊಡಿ ದಾಖಲೆ ಕೊಡಿ ಎಂದು ಹೇಳುತ್ತೀರಾ! ಇಲ್ನೋಡಿ ನಿಮ್ಮ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಎಂದು ಹೇಳುವ ಮೂಲಕ 60% ಕಮಿಷನ್ ಆರೋಪವನ್ನು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಟ್ಯಾಗ್ ಮಾಡಿ ಸರ್ಕಾರದ ವಿರುದ್ಧ ಪರ್ಸೆಂಟೇಜ್ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ನಡೆಸಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿಬೇಕಾ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.
ಗುತ್ತಿಗೆದಾರರಿಗೆ 32,000 ಕೋಟಿಯಷ್ಟು ಬಿಲ್ ಬಾಕಿ ಇದೆ. ಸಾಲ ಮಾಡಿ ಗುತ್ತಿಗೆದಾರರು ಕಾಮಗಾರಿ ನಡೆಸಿದರೆ, ಅವರ ಮೇಲೂ ನಿಮ್ಮ ಪರ್ಸೆಂಟೇಜ್ ಕರಿನೆರಳು ಬಿದ್ದಿದೆ. ನಿಮಗೆ ಪರ್ಸೆಂಟೇಜ್ ನೀಡಲೂ ಆಗದೇ ಗುತ್ತಿಗೆದಾರರು ದಯಾಮರಣ ಅರ್ಜಿ ಬರೆಯುತ್ತಿದ್ದಾರೆ ಎಂದು ಎಚ್‌ಡಿಕೆ ಕಳವಳ ವ್ಯಕ್ತಪಡಿಸಿದ್ದಾರೆ.
ಜಲ ಸಂಪನ್ಮೂಲ: 14,600 ಕೋಟಿ, ಲೋಕೋಪಯೋಗಿ 10,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ 3100 ಕೋಟಿ, ಸಣ್ಣ ನೀರಾವರಿ 2800 ಕೋಟಿ, ಇತರೆ ಇಲಾಖೆ 1500 ಕೋಟಿ ಸೇರಿ ಒಟ್ಟು 32,000 ಕೋಟಿ ರೂಪಾಯಿ ಬಾಕಿ ಇದೆ ಎಂದು ಸಚಿವರು ಗಂಭೀರ ಆರೋಪ ಮಾಡಿದ್ದಾರೆ.
ಭಂಡತನ ಬಿಟ್ಟು ತಪ್ಪನ್ನು ಒಪ್ಪಿಕೊಂಡು ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿಯ ಕಡೆ ಗಮನ ಹರಿಸಿ. ನನ್ನ ಮೇಲೆ ನಿಮ್ಮ ಸಂಪುಟ ವಾಗ್ಯುದ್ಧಕ್ಕಿಳಿದರೆ ಪ್ರಯೋಜನವಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…