Mysore
19
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ನವದೆಹಲಿ: ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು.

ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.

ಪ್ರಧಾನಿ ಮೋದಿ ಅವರ ಆತ್ಮನಿರ್ಭರ್‌ ಭಾರತ್‌, ಮೇಕ್‌ ಇನ್‌ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಎಚ್‌ಡಿಕೆ ಮಾಹಿತಿ ನೀಡಿದರು.

ಬೃಹತ್‌ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್‌ ಬಗ್ಗೆಯೂ ವಿವರಣೆ ಕೊಟ್ಟರು.

ದೇಶದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್‌ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ 11,400 ಕೋಟಿ ರೂಗಳ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

 

Tags:
error: Content is protected !!