ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು.
ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.
ಪ್ರಧಾನಿ ಮೋದಿ ಅವರ ಆತ್ಮನಿರ್ಭರ್ ಭಾರತ್, ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಎಚ್‌ಡಿಕೆ ಮಾಹಿತಿ ನೀಡಿದರು.
ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ವಿವರಣೆ ಕೊಟ್ಟರು.
ದೇಶದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ 11,400 ಕೋಟಿ ರೂಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…