ನವದೆಹಲಿ: ಎರಡನೇ ಅವಧಿಗೆ ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭಕ್ಕೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾಗಿಯಾಗಲಿದ್ದಾರೆ.
ಇದೇ ತಿಂಗಳ ಜನವರಿ.20ರಂದು ವಾಷಿಂಗ್ಟನ್ ಡಿ.ಸಿಯಲ್ಲಿ ನಡೆಯುವ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಅವರು, ಟ್ರಂಪ್‌ಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.
ಅಮೇರಿಕಾದ ಆಹ್ವಾನದ ಮೇರೆಗೆ ವಿದೇಶಾಂಗ ಸಚಿವ ಜೈಶಂಕರ್ ಅವರು, ಟೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಅದೇ ಸಂದರ್ಭದಲ್ಲಿ ಅಮೇರಿಕಾ ಆಡಳಿತದ ಪ್ರತಿನಿಧಿಗಳು, ಇತರ ರಾಷ್ಟ್ರಗಳ ಗಣ್ಯರೊಂದಿಗೆ ದೇಶಗಳ ನಡುವಿನ ಭಾಂದವ್ಯದ ಕುರಿತಾಗಿ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್, ಆಪಲ್ ಕಂಪನಿಯ ಸಿಇಒ ಟಿಮ್ ಕುಕ್ ಸೇರಿದಂತೆ ವಿವಿಧ ದೇಶಗಳ ಮುಖ್ಯಸ್ಥರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಡೊನಾಲ್ಡ್ ಟ್ರಂಪ್ 2017ರಂದು ಮೊದಲ ಬಾರಿಗೆ ಅಮೇರಿಕಾದ ಅಧ್ಯಕ್ಷ ಗದ್ದುಗೆ ಏರಿದ್ದರು. ಈಗ ಎರಡನೇ ಬಾರಿಗೆ ಅಧ್ಯಕ್ಷ ಗದ್ದುಗೆ ಏರುತ್ತಿದ್ದು, ಗಣ್ಯಾತಿಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.





