ದೇಶ- ವಿದೇಶ

ಜನವರಿ.20ರಂದು ಡೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ: ವಿದೇಶಾಂಗ ಸಚಿವ ಜೈ ಶಂಕರ್‌ ಭಾಗಿ

ನವದೆಹಲಿ: ಎರಡನೇ ಅವಧಿಗೆ ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡೊನಾಲ್ಡ್‌ ಟ್ರಂಪ್‌ ಅವರ ಪದಗ್ರಹಣ ಸಮಾರಂಭಕ್ಕೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭಾಗಿಯಾಗಲಿದ್ದಾರೆ.

ಇದೇ ತಿಂಗಳ ಜನವರಿ.20ರಂದು ವಾಷಿಂಗ್ಟನ್‌ ಡಿ.ಸಿಯಲ್ಲಿ ನಡೆಯುವ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ಅವರು, ಟ್ರಂಪ್‌ಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

ಅಮೇರಿಕಾದ ಆಹ್ವಾನದ ಮೇರೆಗೆ ವಿದೇಶಾಂಗ ಸಚಿವ ಜೈಶಂಕರ್‌ ಅವರು, ಟೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಅದೇ ಸಂದರ್ಭದಲ್ಲಿ ಅಮೇರಿಕಾ ಆಡಳಿತದ ಪ್ರತಿನಿಧಿಗಳು, ಇತರ ರಾಷ್ಟ್ರಗಳ ಗಣ್ಯರೊಂದಿಗೆ ದೇಶಗಳ ನಡುವಿನ ಭಾಂದವ್ಯದ ಕುರಿತಾಗಿ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌, ಆಪಲ್‌ ಕಂಪನಿಯ ಸಿಇಒ ಟಿಮ್‌ ಕುಕ್‌ ಸೇರಿದಂತೆ ವಿವಿಧ ದೇಶಗಳ ಮುಖ್ಯಸ್ಥರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಡೊನಾಲ್ಡ್‌ ಟ್ರಂಪ್‌ 2017ರಂದು ಮೊದಲ ಬಾರಿಗೆ ಅಮೇರಿಕಾದ ಅಧ್ಯಕ್ಷ ಗದ್ದುಗೆ ಏರಿದ್ದರು. ಈಗ ಎರಡನೇ ಬಾರಿಗೆ ಅಧ್ಯಕ್ಷ ಗದ್ದುಗೆ ಏರುತ್ತಿದ್ದು, ಗಣ್ಯಾತಿಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

1 hour ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

1 hour ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

1 hour ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

1 hour ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

11 hours ago