ನವದೆಹಲಿ: ನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿಯಾಗುತ್ತದೆ ಎಂದು ರಾಹುಲ್ ಗಾಂಧಿ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಕಿಡಿಕಾರಿದ್ದಾರೆ.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದಗ್ರಹಣ ಕಾರ್ಯಕ್ರಮಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಆಹ್ವಾನವನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ವಿದೇಶಾಂಗ ಸಚಿವರನ್ನು ಅಮೆರಿಕಾಗೆ ಕಳುಹಿಸಲಾಗಿತ್ತು ಎಂಬ ರಾಹುಲ್ ಗಾಂಧಿ ಹೇಳಿಕೆ ಈಗ ಭಾರೀ ಚರ್ಚೆಯಾಗುತ್ತಿದೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಸರ್ಕಾರ ಸದನದಲ್ಲಿ ಖಂಡಿಸಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ವಿದೇಶಾಂಗ ಸಚಿವ ಜೈಶಂಕರ್ ಅವರು, ರಾಹುಲ್ ಗಾಂಧಿ ಡಿಸೆಂಬರ್ 2024ರಲ್ಲಿ ನನ್ನ ಅಮೆರಿಕಾ ಭೇಟಿಯ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹೇಳಿದ್ದಾರೆ. ಅಂದು ನಾನು ಬೈಡನ್ ಆಡಳಿತದ ವಿದೇಶಾಂಗ ಕಾರ್ಯದರ್ಶಿ ಮತ್ತು ಎನ್‌ಎಸ್‌ಎ ಅವರನ್ನು ಭೇಟಿ ಮಾಡಲು ಹೋಗಿದ್ದೆ ಎಂದು ಸ್ಪಷ್ಟಪಡಿಸಿದರು.
ರಾಹುಲ್ ಗಾಂಧಿಯವರ ಸುಳ್ಳುಗಳು ರಾಜಕೀಯ ಉದ್ದೇಶವನ್ನು ಹೊಂದಿರಬಹುದು. ಆದರೆ ಅವು ವಿದೇಶದಲ್ಲಿ ರಾಷ್ಟ್ರಕ್ಕೆ ಹಾನಿ ಮಾಡುತ್ತವೆ ಎಂದು ಹೇಳಿದ್ದಾರೆ.