ನವದೆಹಲಿ: ಕೇಂದ್ರದಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದ್ದು, ಇದರ ಗಾತ್ರ 32.07 ಲಕ್ಷ ಕೋಟಿ ಆಗಿದೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ನಲ್ಲಿ 9 ಕ್ಷೇತ್ರಗಳಿಗೆ ಅಂದರೆ, ಉತ್ಪಾದಕರೆ ಮತ್ತು ಅಭಿವೃದ್ಧಿ, ಅನ್ನದಾತರು, ಕಾರ್ಮಿಕರು, ಮಹಿಳೆಯರು, ಉದ್ಯೋಗ, ಬಡತನ ನಿರ್ಮೂಲನೆ, ಕೌಶಲ್ಯ, ಆರ್ಥಿಕತೆ, ಸಾಮಾಜಿಕ ನ್ಯಾಯ ಹಾಗೂ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಈ ಎಲ್ಲಾ ಕ್ಷೇತ್ರಗಳಿಗೆ ಭರ್ಜರಿ ಕೊಡುಗೆ ನೀಡಲಾಗಿದ್ದು, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರ ಜೊತೆಗೆ ಮನೆ ನಿರ್ಮಾಣ, ರೈತರು, ಬಡತನ ನಿರ್ಮೂಲನೆಗೆ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ.
ಇನ್ನೂ ಮನೆಗಳಿಗೂ ಉಚಿತ ಸೋಲಾರ್ ವಿದ್ಯುತ್ ಬಗ್ಗೆ ಘೋಷಣೆ ಮಾಡಲಾಗಿದ್ದು, ಕತ್ತಲಿನಿಂದ ಬೆಳಿಕೆನೆಡೆಗೆ ಸಾಗಲು ಇದು ಎಲ್ಲರಿಗೂ ಸಹಕಾರಿಯಾಗಲಿದೆ.
ಇನ್ನೂ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲು ಬೆಂಬಲ ನೀಡಿದ್ದ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಬಂಪರ್ ಆಫರ್ ಘೋಷಣೆ ಮಾಡಲಾಗಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡುಗೆ ಈ ಬಾರಿಯ ಕೇಂದ್ರ ಬಜೆಟ್ ತೃಪ್ತಿ ತಂದಿದೆ.