ಮಧ್ಯಮ ವರ್ಗದ ನೆಟ್ಟಿಗನ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ದೇಶದಲ್ಲಿ ಎಲ್ಲಾ ಸರಕುಗಳಿಗೂ ಟ್ಯಾಕ್ಸ್‌ ಹಾಕುತ್ತಿರುವ ಕಾರಣಕ್ಕೆ ಮಧ್ಯಮ ವರ್ಗದವರು ಬದುಕಲು ಆಗುತ್ತಿಲ್ಲ ಎಂಬ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಮಧ್ಯಮ ವರ್ಗದ ನೆಟ್ಟಿಗರೊಬ್ಬರು ಕೇಂದ್ರ ಹಣಕಾಸು ಸಚಿವರಿಗೆ ಪ್ರಶ್ನಿಸಿದ್ದಾರೆ. ಆದರೆ ಇದೀಗ ಈ ಪ್ರಶ್ನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಉತ್ತರಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ತುಷಾರ್‌ ಶರ್ಮಾ ಎಂಬ ನೆಟ್ಟಿಗಗೊಬ್ಬ ತಮ್ಮ ಎಕ್ಸ್‌ ಖಾತೆಯ ವೇದಿಕೆಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಉತ್ತರ ನೀಡಿರುವ ಅವರು, ನಿಮ್ಮ ಹೇಳಿಕೆಗಳಿಗೆ ಮತ್ತು ದೇಶದ ಜನರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿರುವುದಕ್ಕೆ ಧನ್ಯವಾದಗಳು. ನೀವು ಎತ್ತಿರುವ ಸಮಸ್ಯೆಯನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸ್ಪಂದಿಸುವ ಸರ್ಕಾರವಾಗಿದೆ. ಸಾರ್ವಜನಿಕರ ಧ್ವನಿಯನ್ನು ಆಲಿಸಿ ಪರಿಹಾರ ನೀಡುತ್ತದೆ. ಪರಿಸ್ಥಿತಿ ಅರ್ಥ ಮಾಡಿಕೊಂಡಿದ್ದಕ್ಕೆ ಇನ್ನೊಮ್ಮೆ ಧನ್ಯವಾದ. ನೀವು ನೀಡಿರುವ ಮಾಹಿತಿ ಅತ್ಯಮೂಲ್ಯವಾಗಿದೆ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

2 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

7 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

7 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

7 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

7 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

7 hours ago