ಗೋವಾ: ಕಾಂಗ್ರೆಸ್ ಮಾಡಿದ ತಪ್ಪುಗಳನ್ನೇ ನಾವು ಮುಂದುವರಿಸಿದರೆ ನಮ್ಮ ಆಡಳಿತದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.
ಗೋವಾ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ ಅವರು, ಬಿಜೆಪಿ ಆಡಳಿತದಲ್ಲಿ ಭಿನ್ನತೆ ಹೊಂದಿರುವ ಪಕ್ಷವಾಗಿದೆ. ಅದಕ್ಕಾಗಿಯೇ ಪಕ್ಷವು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ. ನಾವು ಕಾಂಗ್ರೆಸ್ ತಪ್ಪುಗಳನ್ನೇ ಮುಂದುವರಿಸಿದರೆ, ಅವರ ನಿರ್ಗಮನ ಮತ್ತು ನಮ್ಮ ಪ್ರವೇಶದಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.
ನಮ್ಮದು ಭಿನ್ನತೆ ಹೊಂದಿರುವ ಪಕ್ಷ ಎಂದು ಅಡ್ವಾಣಿ ಹೇಳುತ್ತಿದ್ದರು. ಇತರ ಪಕ್ಷಗಳಿಂದ ಎಷ್ಟು ಭಿನ್ನವಾಗಿದ್ದೇವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ.
ಕಾಂಗ್ರೆಸ್‌ನ ತಪ್ಪುಗಳಿಂದಾಗಿ ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಅದೇ ತಪ್ಪುಗಳನ್ನು ನಮ್ಮ ಪಕ್ಷದವರು ಮಾಡಬಾರದು. ಅದಕ್ಕಾಗಿಯೇ ಮುಂದಿನ ದಿನಗಳಲ್ಲಿ ರಾಜಕೀಯವು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ತರುವ ಸಾಧನವಾಗಿದೆ ಎಂಬುದನ್ನು ಪಕ್ಷದ ಕಾರ್ಯಕರ್ತರು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ನಾವು ಭ್ರಷ್ಟಾಚಾರ ಮುಕ್ತ ದೇಶವನ್ನು ರಚಿಸಬೇಕಾಗಿದೆ. ಅದಕ್ಕಾಗಿ ನಾವು ಯೋಜನೆಯನ್ನು ಹೊಂದಿರಬೇಕು. ನಾನು ಜಾತಿ ರಾಜಕಾರಣದಲ್ಲಿ ತೊಡಗುವುದಿಲ್ಲ ಎಂದು ಜನರಿಗೆ ಹೇಳಿದ್ದೇನೆ. ನಾನು ಈ ಪ್ರವೃತಿಯನ್ನು ಅನುಸರಿಸದಿರಲು ನಿರ್ಧರಿಸಿದ್ದೇನೆ ಎಂದು ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…