ದೇಶ- ವಿದೇಶ

ಏಮ್ಸ್‌ ಸ್ಥಾಪನೆ ಬಗ್ಗೆ ಕೇಂದ್ರ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್‌

ನವದೆಹಲಿ: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಗಳಲ್ಲೂ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ರಾಜ್ಯದ ಸಂಸದರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ವಿಚಾರವಾಗಿ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ನಾನು ಸಚಿವನಾಗಿದ್ದಾಗಲೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಸಹಕಾರ ನೀಡದೆ ನಿರ್ಲಕ್ಷಿಸುತ್ತಿದೆ ಎಂದರು.

ಈ ಬಾರಿಯ ಬಜೆಟ್‌ನಲ್ಲಿ ಏಮ್ಸ್‌ ಬಗ್ಗೆ ಪ್ರಸ್ತಾಪ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ, ರಾಜ್ಯಕ್ಕೆ ಏಮ್ಸ್‌ ನೀಡಲೇಬಾರದು ಎಂದು ಕೇಂದ್ರ ಸರ್ಕಾರ ನಿರ್ಧಾರ ಮಾಡಿದಂತಿದೆ. ಇದರ ವಿರುದ್ಧ ರಾಜ್ಯದ ಸಂಸತ್‌ ಸದಸ್ಯರು ಹೋರಾಟಕ್ಕೆ ಮುಂದಾಗಿದ್ದಾರೆ ಎಂದರು.

ಜಿ.ಕುಮಾರ ನಾಯಕ ಮಾತನಾಡಿ, ಏಮ್ಸ್‌ಗಾಗಿ ಜಿಲೆಯಲ್ಲಿ ಸಾವಿರಾರು ದಿನಗಳಿಂದ ಹೋರಾಟ ನಡೆಯುತ್ತಿದೆ. ಈ ವಿಚಾರವಾಗಿ ಮುಖ್ಯಮಂತ್ರಿಯವರು ಕೂಡ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಏನು ಪ್ರಯೋಜನವಾಗಿಲ್ಲ. ಕೇಂದ್ರಕ್ಕೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲು ನಿಯೋಗ ಕಲುಹಿಸಲಾಗುವುದು ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌ ಮಾತನಾಡಿ‌, ಏಮ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಪಕ್ಷಾತೀತವಾಗಿ ಹೋರಾಟ ಮಾಡಲು ಬಿಜೆಪಿ ಸಂಸದರಿಗೂ ಆಹ್ವಾನ ನೀಡಿದ್ದೆವು. ಆದರೆ, ಅವರು ಬರಲಿಲ್ಲ. ಈ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

5 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

7 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

7 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

8 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

10 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

10 hours ago