Mysore Dasara Air Show
ಹೊಸದಿಲ್ಲಿ : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು.
ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್ ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…