ದೇಶ- ವಿದೇಶ

ಮೈಸೂರು ದಸರಾ ಏರ್‌ ಶೋಗೆ ಕೇಂದ್ರದ ಸಮ್ಮತಿ : ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ : ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು.

ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್ ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

8 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

9 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

9 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

10 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

10 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

16 hours ago