ದೇಶ- ವಿದೇಶ

ಛಡ್ಡಾ ಬಿಜೆಪಿ ಸೇರ್ಪಡೆ ; ಜೆನ್-ಝೀಗಳಿಂದ ಅನ್‌ಫಾಲೋ ಅಭಿಯಾನ

ನವದೆಹಲಿ : ರಾಜ್ಯಸಭಾ ಸಂಸದ ರಾಘವ್‌ ಛಡ್ಡಾ ಅವರು ಎಎಪಿ(ಆಮ್‌ ಆದ್ಮಿ ಪಾರ್ಟಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯತೆ ಕುಸಿತ ಕಂಡಿದೆ. ಅದರಲ್ಲೂ ಜೆನ್-ಝೀಗಳ ಫೇವರೆಟ್‌ ಇನ್‌ಸ್ಟಾಗ್ರಾಂನಲ್ಲಿ ಸುಮಾರು 10 ಲಕ್ಷ(1ಮಿಲಿಯನ್)‌ ಜನರು ಅನ್‌ಫಾಲೋ ಮಾಡಿದ್ದಾರೆ.

ಎಪ್ರಿಲ್‌ 24ರಂದು, ಪಕ್ಷಾಂತರಕ್ಕೂ ಮೊದಲು ಸುಮಾರು 14.6 ಮಿಲಿಯನ್ ಫಾಲೋವರ್ಸ್ ಹೊಂದಿದ್ದ ಅವರು, ಇದೀಗ ಸುಮಾರು 12.7 ಮಿಲಿಯನ್‌ಗೆ ಇಳಿದಿದ್ದು, ಒಟ್ಟು ಸುಮಾರು 18 ಲಕ್ಷ ಫಾಲೋವರ್ಸ್, ಅಂದರೆ 1.8 ಮಿಲಿಯನ್ ಫಾಲೋವರ್ಸ್ ಕಳೆದುಕೊಂಡಿದ್ದಾರೆ.

ಪಕ್ಷಾಂತರ ಘೋಷಣೆಯಾದ ತಕ್ಷಣವೇ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ 24 ಗಂಟೆಗಳೊಳಗೆ 1.8 ಮಿಲಿಯನ್‌ ಗಿಂತ ಹೆಚ್ಚು ಫಾಲೋವರ್ಸ್ ಕಡಿಮೆಯಾಗಿದ್ದಾರೆ. ನಂತರವೂ ಕುಸಿತ ಮುಂದುವರಿದಿದೆ.

ಬೆಳವಣಿಗೆಗೆ ಪ್ರಮುಖ ಕಾರಣವಾಗಿ ಯುವ ಬಳಗ, ವಿಶೇಷವಾಗಿ ‘ಜೆನ್-ಝೀ’, ನೀಡಿದ ತೀವ್ರ ಪ್ರತಿಕ್ರಿಯೆ ಉಲ್ಲೇಖವಾಗುತ್ತಿದೆ. ಆಮ್ ಆದ್ಮಿ ಪಕ್ಷದಿಂದ ಬಿಜೆಪಿಗೆ ಅವರ ಪಕ್ಷಾಂತರವನ್ನು ಹಲವು ಮಂದಿ ಟೀಕಿಸಿದ್ದು, ಅದಕ್ಕೆ ಪ್ರತಿಯಾಗಿ ‘ಅನ್‌ಫಾಲೋ’ ಅಭಿಯಾನಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿವೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

9 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

12 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

13 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

13 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

19 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

19 hours ago