ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ ಹಕ್ಕುಗಳಿಗಾಗಿ ಮತ್ತು ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಂದು ಕೂಡ ಸಂಸತ್ತಿಗೆ ಮೆರವಣಿಗೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.





