ದೇಶ- ವಿದೇಶ

ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾದ ಚಂಪೈ ಸೂರೆನ್‌..?

ನವದೆಹಲಿ: ಜಾರ್ಖಂಡ್‌ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ್ದಾರೆ ಎಂದು ಬಿಹಾರದ ಮಾಜಿ ಸಿಎಂ ಚಿತನ್‌ ರಾಂ ಮಾಂಝಿ ಹೇಳಿದ್ದಾರೆ.

ಇದರಿಂದ ಜಾರ್ಖಾಂಡ್‌ ಮುಕ್ತಿ ಮೋರ್ಚಾ ಪಕ್ಷ ಮತ್ತು ಜಾರ್ಕಾಂಡ್‌ ಸಿಎಂ ಹೇಮಂತ್‌ ಸೊರೆನ್‌ ಅವರಿಗೆ ಅವರಿಗೆ ಬಹುದೊಡ್ಡ ಹಿನ್ನಡೆಯಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

ಜಿತನ್‌ ರಾಂ ಮಾಂಝಿ ಅವರ ಹಿಂದೂಸ್ಥಾನಿ ಅವಾಮ್‌ ಮಾಂಝಿ ಕೂಡ ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಮಾಂಝಿ, ಬಿಹಾರದಿಂದ ಬೇರ್ಪಟ್ಟು ಜಾರ್ಖಂಡ್‌ ರಾಜ್ಯ ರಚಿಸುವಲ್ಲಿ ಚಂಪೈ ಸೂರೆನ್‌ ಪಾತ್ರ ಮುಖ್ಯ ಹೀಗಾಗಿ ಅವರನ್ನು ಟೈಗರ್‌ ಎನ್ನಲಾಗುತ್ತದೆ. ಅವರು ಹುಲಿಯಾಗಿದ್ದರು ಮತ್ತು ಹುಲಿಯಾಗಿಯೇ ಉಳಿಯುತ್ತಾರೆ ಎಂದಿದ್ದಾರೆ.

ಚಂಪೈ ಸೂರೆನ್‌ ಟ್ವೀಟ್‌
ನಾವು ರಕ್ತ ಮತ್ತು ಬೆವರು ಸುರಿಸಿ ಕಟ್ಟಿದ ಪಕ್ಷದಲ್ಲಿ ನನ್ನ ಅವಮಾನವಾಗಿದೆ. ಜಾರ್ಖಾಂಡ್‌ನ ಮುಖ್ಯಮಂತ್ರಿಯಾಗಿ ಕೂಡ ನಾನು ಸಾಕಷ್ಟು ಅವಮಾನ ಎದುರಿಸಿದೆ ಎಂದು ಹೇಳಿದ್ದಾರೆ. ದೆಹಲಿಗೆ ತಲುಪಿದ ಬೆನ್ನಲ್ಲೇ ಅವರ ಹೇಳಿಕೆ ಹೀಗೆ ಹೊರಬಿದ್ದಿದೆ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಜಾರಿಗೊಳಿಸಿದ್ದ ಎಲ್ಲ ಯೋಜನೆಗಳನ್ನು ಪಕ್ಷದ ಹೈಕಮಾಂಡ್‌ ರದ್ದುಗೊಳಿಸಿದೆ ಎಂದು ದೂರಿದ ಸೂರೆನ್‌, ಸಿಎಂ ಅವರೊಬ್ಬರು ಜಾರಿಗೊಳಿಸಿದ ಯೋಜನೆಗಳನ್ನು ಮತ್ತೊಬ್ಬರು ರದ್ದುಗೊಳಿಸುವುದಕ್ಕಿಂತ ಹೆಚ್ಚು ಅವಮಾನ ಪ್ರಜಾಪ್ರಭುತ್ವದಲ್ಲಿ ಬೇರೇನಿದೆ ಎಂದು ಪ್ರಶ್ನಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

23 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

1 hour ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago