ಅಮರಾವತಿ: ತೆಲಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಇಂದು(ಜೂ.12) ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಂಡಂತಾಗಿದೆ.
ಮಂಗಳವಾರ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಅದರಂತೆ ಬಹುಮತ ಹೊಂದಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿತ್ತು. ಚಂದ್ರಬಾಬು ನಾಯ್ಡು ಜೊತೆಗೆ ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಕೂಡ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೆಲ ತಿಂಗಳುಗಳ ಹಿಂದಷ್ಟೇ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯದಿಂದ(ಇಡಿ) ಜೈಲು ಸೇರಿದ್ದ ಚಂದ್ರನಾಯ್ಡು ನಾಯ್ಡು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರು ಅವರು ತಮ್ಮ ಟಿಡಿಪಿಯನ್ನು ಬಿಜೆಪಿ ಮತ್ತು ಜನಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಎದುರಿಸಿ, ಭರ್ಜರಿ ಗೆಲುವು ಸಾಧಿಸಿದ್ದರು.
ಚಂದ್ರಬಾಬು ನಾಯ್ಡು ಅವರೊಂದಿಗೆ, ಅವರ ಪುತ್ರ ನಾರಾ ಲೋಕೇಶ್ ಹಾಗೂ ನಟ ಪವನ್ ಕಲ್ಯಾಣ್ ಸೇರಿದಂತೆ 23 ಮಂದಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಯ್ಡು ಕ್ಯಾಬಿನೆಟ್‌ನಲ್ಲಿ ಜನಸೇನೆಗೆ ಮೂರು ಹಾಗೂ ಬಿಜೆಯ ಒಬ್ಬರಿಗೆ ಅವಕಾಶ ನೀಡಲಾಗಿದೆ.
ಆಂಧ್ರಪ್ರದೇಶದ ವಿಜಯವಾಢದಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಸೂಪರ್‌ಸ್ಟಾರ್ ರಜನಿಕಾಂತ್, ನಟ ಚಿರಂಜೀವಿ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.
ಈ(2024) ಬಾರಿಯ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 175 ಸ್ಥಾನಗಳ ಪೈಕಿ ಎನ್‌ಡಿಎ 164 ಸ್ಥಾನಗಳನ್ನು ಗಳಿಸಿತ್ತು. ಟಿಡಿಪಿ 135 ಸ್ಥಾನಗಳನ್ನು ಗೆದ್ದಿತ್ತು. ಪವನ್ ಕಲ್ಯಾಣ್ ಅವರ ಜನಸೇನೆ 21 ಸ್ಥಾನಗಳಿಸಿ ಬಿಜೆಪಿ 8 ಸ್ಥಾನಗಳನ್ನು ಗಳಿಸಿತ್ತು. ಇನ್ನೂ ಆಡಳಿತರೂಢ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಕೇವಲ 11 ಸ್ಥಾನಗಳನ್ನು ಮಾತ್ರ ಗಳಿಸಿಕೊಂಡಿದೆ.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…