ದೇಶ- ವಿದೇಶ

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ಅಮರಾವತಿ: ತೆಲಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಇಂದು(ಜೂ.12) ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಂಡಂತಾಗಿದೆ.

ಮಂಗಳವಾರ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್‌ ನಜೀರ್‌ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಅದರಂತೆ ಬಹುಮತ ಹೊಂದಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯಾಪಕ ಭದ್ರತೆ ಕಲ್ಪಿಸಲಾಗಿತ್ತು. ಚಂದ್ರಬಾಬು ನಾಯ್ಡು ಜೊತೆಗೆ ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ನಟ ಪವನ್‌ ಕಲ್ಯಾಣ್‌ ಕೂಡ ಕ್ಯಾಬಿನೆಟ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೆಲ ತಿಂಗಳುಗಳ ಹಿಂದಷ್ಟೇ ಮನಿ ಲಾಂಡರಿಂಗ್‌ ತನಿಖೆಯಲ್ಲಿ ಜಾರಿ ನಿರ್ದೇಶನಾಲಯದಿಂದ(ಇಡಿ) ಜೈಲು ಸೇರಿದ್ದ ಚಂದ್ರನಾಯ್ಡು ನಾಯ್ಡು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನಂತರು ಅವರು ತಮ್ಮ ಟಿಡಿಪಿಯನ್ನು ಬಿಜೆಪಿ ಮತ್ತು ಜನಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಎದುರಿಸಿ, ಭರ್ಜರಿ ಗೆಲುವು ಸಾಧಿಸಿದ್ದರು.

ಚಂದ್ರಬಾಬು ನಾಯ್ಡು ಅವರೊಂದಿಗೆ, ಅವರ ಪುತ್ರ ನಾರಾ ಲೋಕೇಶ್‌ ಹಾಗೂ ನಟ ಪವನ್‌ ಕಲ್ಯಾಣ್‌ ಸೇರಿದಂತೆ 23 ಮಂದಿ ಕ್ಯಾಬಿನೆಟ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಯ್ಡು ಕ್ಯಾಬಿನೆಟ್‌ನಲ್ಲಿ ಜನಸೇನೆಗೆ ಮೂರು ಹಾಗೂ ಬಿಜೆಯ ಒಬ್ಬರಿಗೆ ಅವಕಾಶ ನೀಡಲಾಗಿದೆ.

ಆಂಧ್ರಪ್ರದೇಶದ ವಿಜಯವಾಢದಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಸೂಪರ್‌ಸ್ಟಾರ್‌ ರಜನಿಕಾಂತ್‌, ನಟ ಚಿರಂಜೀವಿ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಈ(2024) ಬಾರಿಯ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 175 ಸ್ಥಾನಗಳ ಪೈಕಿ ಎನ್‌ಡಿಎ 164 ಸ್ಥಾನಗಳನ್ನು ಗಳಿಸಿತ್ತು. ಟಿಡಿಪಿ 135 ಸ್ಥಾನಗಳನ್ನು ಗೆದ್ದಿತ್ತು. ಪವನ್‌ ಕಲ್ಯಾಣ್‌ ಅವರ ಜನಸೇನೆ 21 ಸ್ಥಾನಗಳಿಸಿ ಬಿಜೆಪಿ 8 ಸ್ಥಾನಗಳನ್ನು ಗಳಿಸಿತ್ತು. ಇನ್ನೂ ಆಡಳಿತರೂಢ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಕೇವಲ 11 ಸ್ಥಾನಗಳನ್ನು ಮಾತ್ರ ಗಳಿಸಿಕೊಂಡಿದೆ.

 

 

 

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

7 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

8 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

8 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

9 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

9 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

15 hours ago