ದೇಶ- ವಿದೇಶ

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯೇ ಗೆಲುವು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ

ದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮ್ಮ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕ್ಷೇತ್ರದಲ್ಲಿ ಮತ್ತೆ ಪಾರುಪತ್ಯ ಸಾಧಿಸಲು ಎಚ್.ಡಿ.ಕುಮಾರಸ್ವಾಮಿ ಬಿಗ್‌ ಪ್ಲಾನ್‌ ರೂಪಿಸಿದ್ದಾರೆ.

ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ ಕುಮಾರಸ್ವಾಮಿ ಈಗ ಸಖತ್‌ ಪ್ಲಾನ್‌ ರೂಪಿಸುತ್ತಿದ್ದು, ಈಗಿನಿಂದಲೇ ಚನ್ನಪಟ್ಟಣದಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಅವರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಉಪಚುನಾವಣೆ ನಡೆಯಲು ಇನ್ನೂ ಸಾಕಷ್ಟು ಸಮಯ ಇದೆ. ಸಮಯ ಬಂದಾಗಲೇ ಅಭ್ಯರ್ಥಿ ಆಯ್ಕೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಕಾಂಗ್ರೆಸ್‌ನಿಂದ ಡಿಕೆಶಿ ಅಲ್ಲಾ ಯಾರೇ ಬಂದರೂ ಕ್ಷೇತ್ರದ ಜನತೆ ನಮ್ಮನ್ನು ಕೈಬಿಡಲ್ಲ. ಹಾಗಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡಿ ಭಾರೀ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago