ದೇಶ- ವಿದೇಶ

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನನ್ನ ಸಂಪೂರ್ಣ ಬೆಂಬಲ ಎಂದ ಸಿ.ಪಿ.ಯೋಗೇಶ್ವರ್‌

ದೆಹಲಿ: ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದರೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧಿಸಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಕೇಂದ್ರ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್, ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಸಕಲ ರೀತಿಯಲ್ಲೂ ಸಜ್ಜಾಗುತ್ತಿವೆ. ಹೇಗಾದರೂ ಮಾಡಿ ಕ್ಷೇತ್ರ ಉಳಿಸಿಕೊಳ್ಳಲೇಬೇಕು ಎಂದು ಕುಮಾರಸ್ವಾಮಿ ಭಾರೀ ತಂತ್ರ ರೂಪಿಸುತ್ತಿದ್ದಾರೆ.

ಬಿಜೆಪಿಯಿಂದ ಮಾಜಿ ಸಚಿವ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಅವರು ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಎಂಬ ಮಾತಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿಂದು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್‌ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಲಾವಕಾಶ ಬೇಕಾಗಿದೆ. ಈ ಬಗ್ಗೆ ವರಿಷ್ಠರು ಏನು ಹೇಳುತ್ತಾರೋ ಅದನ್ನು ಕೇಳುತ್ತೇನೆ. ನನ್ನನ್ನು ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಎಂದು ಯಾರೂ ಕೇಳಿಲ್ಲ. ಕುಮಾರಸ್ವಾಮಿ ಆಶೀರ್ವಾದ ಇಲ್ಲದೇ ಏನೂ ಕೂಡ ನಡೆಯಲ್ಲ. ಪಕ್ಷದಿಂದ ಟಿಕೆಟ್‌ ಸಿಗದಿದ್ರೂ ಎನ್‌ಡಿಎಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ. ಎನ್‌ಡಿಎ ಬಿಟ್ಟು ನಾನು ಎಲ್ಲೂ ಕೂಡ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನೂ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಿಖಿಲ್‌ ಸ್ಪರ್ಧಿಸಿದ್ರೆ ನನ್ನ ಸಂಪೂರ್ಣ ಬೆಂಬಲವಿದೆ. ನಾನು ಯಾವುದೇ ಒಳಸಂಚು ಮಾಡಲ್ಲ. ನಿಖಿಲ್‌ಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

4 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

5 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

9 hours ago