ಸುಕ್ಮಾ: ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು(ಮಾರ್ಚ್.1) ಬೆಳಿಗ್ಗೆ ಎನ್‌ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳ ಜಂಟಿ ಸೇನೆಯೂ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಅಲ್ಲದೇ ಜಿಲ್ಲಾ ಮೀಸಲು ಪೊಲೀಸ್ ಪಡೆ ಹಾಗೂ ಕೋಬ್ರಾ ಬೆಟಾಲಿಯನ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ತಿಂಗಳಿನಲ್ಲಿ ಪೊಲೀಸರು ಹಾಗೂ ನಕ್ಸಲರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳೆ ಸೇರಿದಂತೆ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ ಹತ್ಯೆಯಾದವರಲ್ಲಿ ಕಮಾಂಡರ್ ಆಶಾ ಸೇರಿದ್ದು, ನಕ್ಸಲರ ಸುಳಿವು ನೀಡಿದವರಿಗೆ 14 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದರು. ಇನ್ನು ಛತ್ತೀಸಗಢದ ಕೆಬಿ ಹೆಸರಿನಲ್ಲಿ ನಕ್ಸಲ್ ಸಂಘಟನೆಯನ್ನು ಆಶಾ ಕಟ್ಟುತ್ತಿದ್ದರು. ಹೀಗಾಗಿ ಉಳಿದ ನಕ್ಸಲರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…