ದೇಶ- ವಿದೇಶ

ಛತ್ತೀಸ್‌ಗಢ: ಭದ್ರತಾ ಪಡೆಗಳು-ನಕ್ಸಲರ ಮಧ್ಯೆ ಗುಂಡಿನ ಚಕಮಕಿ

ಸುಕ್ಮಾ: ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಸ್ತಾರಾಮ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು(ಮಾರ್ಚ್‌.1) ಬೆಳಿಗ್ಗೆ ಎನ್‌ಕೌಂಟರ್‌ ನಡೆದಿದ್ದು, ಭದ್ರತಾ ಪಡೆಗಳ ಜಂಟಿ ಸೇನೆಯೂ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಅಲ್ಲದೇ ಜಿಲ್ಲಾ ಮೀಸಲು ಪೊಲೀಸ್‌ ಪಡೆ ಹಾಗೂ ಕೋಬ್ರಾ ಬೆಟಾಲಿಯನ್‌ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳಿನಲ್ಲಿ ಪೊಲೀಸರು ಹಾಗೂ ನಕ್ಸಲರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳೆ ಸೇರಿದಂತೆ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ ಹತ್ಯೆಯಾದವರಲ್ಲಿ ಕಮಾಂಡರ್‌ ಆಶಾ ಸೇರಿದ್ದು, ನಕ್ಸಲರ ಸುಳಿವು ನೀಡಿದವರಿಗೆ 14 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದರು. ಇನ್ನು ಛತ್ತೀಸಗಢದ ಕೆಬಿ ಹೆಸರಿನಲ್ಲಿ ನಕ್ಸಲ್‌ ಸಂಘಟನೆಯನ್ನು ಆಶಾ ಕಟ್ಟುತ್ತಿದ್ದರು. ಹೀಗಾಗಿ ಉಳಿದ ನಕ್ಸಲರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ಅರ್ಚನ ಎಸ್‌ ಎಸ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago