ಜೈಪುರ: ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಯೋಧರು ತರಬೇತಿ ಪಡೆಯುವ ಸಂದರ್ಭದಲ್ಲಿ ಟ್ಯಾಂಕರ್‌ಗೆ ರಾಸಾಯನಿಕ ಭರ್ತಿ ಮಾಡುವಾಗ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೈಪುರ ಬಳಿಯಿರುವ ಬಿಕೇನಾರ್‌ನ ಫೈರಿಂಗ್ ರೇಂಜ್‌ನಲ್ಲಿ ಇಂದು(ಡಿಸೆಂಬರ್.18) ಯುದ್ಧ ಟ್ಯಾಂಕರ್‌ಗೆ ರಾಸಾಯನಿಕ ಭರ್ತಿ ಮಾಡುವಾಗ ಚಾರ್ಜರ್ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
ಈ ಘಟನೆ ಸಂಭವಿಸಿದಾಗ ಇಬ್ಬರು ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದರು.ಆದರೆ ಗಾಯಗೊಂಡ ಇಬ್ಬರು ಯೋಧರು ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಈ ಇಬ್ಬರನ್ನು ಉತ್ತರಪ್ರದೇಶದ ಅಶುತೋಷ್ ಮಿಶ್ರಾ ಹಾಗೂ ರಾಜಸ್ಥಾನ ಮೂಲದ ಜಿತೇಂದ್ರ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಹಿಂದೆಯೂ ತರಬೇತಿ ವೇಳೆ ಇಂತಹ ಸ್ಫೋಟ ಸಂಭವಿಸಿದ್ದು, ಯೋಧರೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…
ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…
ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…