ರಾಯಪುರ : ಛತ್ತೀಸಗಢ ರಾಜ್ಯದಲ್ಲಿ ನಕ್ಸಲ್ ಪಿಡುಗನ್ನು ನಿರ್ಮೂಲನೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಭಾನುವಾರ ರಾಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರಾಷ್ಟ್ರಪತಿಯವರ ಬಣ್ಣಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇಲ್ಲಿನ ನಕ್ಸಲ್ ಪಿಡುಗನ್ನು 2026ರ ಮಾ.31 ರೊಳಗಾಗಿ ನಿರ್ಮೂಲನೆ ಮಾಡಲಾಗುವುದು. ಛತ್ತೀಸಗಢವು ನಕ್ಸಲ್ ಮುಕ್ತವಾದರೆ ಇಡೀ ದೇಶ ನಕ್ಸಲ್ ಹಾವಳಿಯಿಂದ ಮುಕ್ತವಾದಂತಾಗುತ್ತದೆ ಎಂದು ಹೇಳಿದರು.
ಛತ್ತೀಸಗಢದ ಪೊಲೀಸರು ನಕ್ಸಲರ ವಿರುದ್ಧದ ಹೋರಾಟದಲ್ಲಿ ಕಳೆದೊಂದು ವರ್ಷದಿಂದ ಗಮನಾರ್ಹ ಸಾಧನೆ ಮಾಡಿದ್ದಾರೆ. 287 ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿದ್ದು, 1000 ಮಂದಿ ಬಂಧಿತರಾಗಿದ್ದಾರೆ. ನಕ್ಸಲರ ನಾಯಕರು ಸಹ ಶಸ್ತ್ರಾಸ್ತ್ರ ತ್ಯಜಿಸಿದ್ದಾರೆ. ಇದೇ ರೀತಿ ಉಳಿದ ನಕ್ಸಲರು ಹಿಂಸಾಚಾರ ಬಿಟ್ಟು ಮುಖ್ಯವಾಹಿನಿಗೆ ಬರಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…