ದಂತೇವಾಡ: ಛತ್ತೀಸ್‌ಗಡದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ನಕ್ಸಲೀಯರ ಮುಖಾಮುಖಿಯಲ್ಲಿ ಜಿಲ್ಲಾ ಭದ್ರತಾ ಪೊಲೀಸ್ ಪಡೆಯ (DRG) ಹೆಡ್ ಕಾನ್ಸ್‌ಟೇಬಲ್ ಸನ್ನು ಕರಮ್ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ನಾರಾಯಣಪುರ ಹಾಗೂ ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮದ್ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿ ಹೇಳಿದ್ದಾರೆ.
ಗುಂಡಿನ ಚಕಮಕಿ ನಿಂತ ನಂತರ ನಾಲ್ವರು ನಕ್ಸಲರ ಶವಗಳು, AK-47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (SLR) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…