ದಂತೇವಾಡ: ಛತ್ತೀಸ್‌ಗಢದ ಬಸ್ತರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಪ್ರಕರಣದಲ್ಲಿ ತೆಲಂಗಾಣ ರಾಜ್ಯದ ವಾರಂಗಲ್ ಮೂಲದ ನಿವಾಸಿಯಾಗಿದ್ದ ನಕ್ಸಲ್ ಮಹಿಳೆ ರೇಣುಕಾ ಅಲಿಯಾಸ್ ಸರಸ್ವತಿ ಸಾವನ್ನಪ್ಪಿದ್ದಾರೆ.
ಗೀದಮ(ದಂತೇವಾಡ) ಮತ್ತು ಭೈರಮಗಢ(ಬಿಜಾಪುರ) ಅರಣ್ಯ ಪ್ರದೇಶದಲ್ಲಿ ಇಂದು(ಮಾರ್ಚ್.31) ಸುಮಾರು ಬೆಳಿಗ್ಗೆ 9 ಗಂಟೆಯ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್ ಮುಗಿದ ಬಳಿಕ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಸಿಬ್ಬಂದಿಗಳಿಗೆ ಮಹಿಳಾ ನಕ್ಸಲ್ ಮೃತದೇಹ ಪತ್ತೆಯಾಗಿದೆ. ಅಲ್ಲದೇ ಭದ್ರತಾ ಸಿಬ್ಬಂದಿಗಳು ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಹಾಗೂ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರಾಯ್ ಹೇಳಿದ್ದಾರೆ.
ಇನ್ನು ಮೃತರಾದ ನಕ್ಸಲ್ ಮಹಿಳೆಯೂ ನಕ್ಸಲ ವಿಶೇಷ ವಲಯ ಸಮಿತಿ ಸದಸ್ಯರಾಗಿದ್ದರು. ಅಲ್ಲದೇ , ದಂಡಕಾರಣ್ಯ ವಿಶೇಷ ವಲಯ ಸಮಿತಿಯ ಪತ್ರಿಕಾ ತಂಡದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…