ಬೆಂಗಳೂರು : ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡದೇ ಇದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಸಲಹೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪಿ.ಚಿದಂಬರಂ, ಅಮೆರಿಕದಲ್ಲಿ ನಡೆಯುವ ಕೆಲ ಕಾರ್ಯಕ್ರಮಗಳಿಗೆ ಆಹ್ವಾನದ ಮೇರೆಗೆ ತೆರಳಲು ಪ್ರಿಯಾಂಕ್ ಖರ್ಗೆ ಮುಂದಾಗಿದ್ದರು. ಅಲ್ಲಿ ಬಂಡವಾಳ ಹೂಡಿಕೆದಾರರು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರ ಜೊತೆ ಚರ್ಚೆ ನಿಗದಿಯಾಗಿತ್ತು. ಆದರೆ ಪ್ರಿಯಾಂಕ್ ಖರ್ಗೆಯವರಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನೀಡದೆ ಭಾರೀ ನಿರಾಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಕೇಂದ್ರ ಸರ್ಕಾರ ತಕ್ಷಣವೇ ಉತ್ತರ ನೀಡಬೇಕು. ಆ ಉತ್ತರ ಸಮರ್ಪಕವಾಗಿಲ್ಲ ಎಂದಾದರೆ ಪ್ರಿಯಾಂಕ್ ಖರ್ಗೆಯವರು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ.
ಪ್ರತಿಯೊಬ್ಬರಿಗೂ ಪ್ರವಾಸ ಮಾಡುವ ಮತ್ತು ಮಾತನಾಡುವ ಸ್ವಾತಂತ್ರ್ಯ ಇದೆ. ಕೇಂದ್ರ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…