ವ್ಯಾಟಿಕನ್: ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಸೇಂಟ್ ಪೀಟರ್ಸ್ ಬೆಸಿಲಿಕಾದಿಂದ 4 ಕಿ.ಮೀ ದೂರದಲ್ಲಿರುವ ರೋಮ್‌ನ ಬೆಸಿಲಿಕಾ ಡಿ ಸಾಂಟಾ ಮಾರಿಯಾ ಮ್ಯಾಗಿಯೋರ್‌ನಲ್ಲಿ ನೆರವೇರಿತು.
ಅಂತ್ಯಕ್ರಿಯೆಗೂ ಮುನ್ನ ಪೋಪ್ ಫ್ರಾನ್ಸಿಸ್ ಅವರ ಶವಪೆಟ್ಟಿಗೆಯನ್ನು ವ್ಯಾಟಿಕನ್ ಸಿಟಿಯಲ್ಲಿ ಇಡಲಾಗಿತ್ತು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಸುಮಾರು 160 ದೇಶಗಳ ಗಣ್ಯರು ಅಂತಿಮ ದರ್ಶನ ಪಡೆದರು.
ಬಳಿಕ ರೋಮ್‌ನ ಬೆಸಿಲಿಕಾ ಡಿ ಸಾಂಟಾ ಮಾರಿಯಾ ಮ್ಯಾಗಿಯೋರ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ನೆರವೇರಿತು.





