ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್ ಶುಭಾಶಯವನ್ನು ಕೋರಿದ್ದಾರೆ.
ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್.25) ಕ್ರಿಸ್‌ಮಸ್ ಸಂಭ್ರಮದಲ್ಲಿ ಭಾಗಿಯಾಗಿದ್ದು, ತಂಡೋಪತಂಡವಾಗಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯ ಮೂಲಕ ಶುಭಾಶಯ ಕೋರಿರುವ ಮೋದೊ ಅವರು, ಭಗವಾನ್ ಜೀಸಸ್ ಅವರು ಹಾಕಿಕೊಟ್ ಮಾರ್ಗಗಳಲ್ಲಿ ನಾವು ಸಾಗಬೇಕಿದೆ. ಆ ಮುಖಾಂತರ ಶಾಂತಿ, ಸಹಬಾಳ್ವೆ ಹಾಗೂ ಸಮೃದ್ಧಿಯನ್ನು ಸಾಧಿಸಬೇಕಿದೆ ಎಂದು ಹೇಳಿದ್ದಾರೆ.
ಇನ್ನು ನವದೆಹಲಿಯಲ್ಲಿರುವ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫ್ರೆನ್ಸ್ ಆಫ್ ಇಂಡಿಯಾದ ವತಿಯಿಂದ ಮಂಗಳವಾರ(ಡಿ.24) ಆಯೋಜಿಸಿದ್ದ ಕ್ರಿಸ್‌ಮಸ್ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯೇಸು ಅವರ ಆಶಯಯದಂತೆ, ಸಹೋದರತೆ, ಸಮಾನತೆ, ಪ್ರೀತಿ ಹಾಗೂ ಭ್ರಾತೃತ್ವದಿಂದ ನಾವು ಬಾಳಬೇಕು ಎಂದು ತಿಳಿಸಿದ್ದಾರೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…