ಹೊಸದಿಲ್ಲಿ : ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ಕರೆಗೆ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಪೋಷಕರು ಸೇರಿದಂತೆ ನೂರಾರು ಮಂದಿ ಬೆಂಬಲ ವ್ಯಕ್ತಪಡಿಸಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿಗಿಳಿದಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ಸಂಘಟನೆಯ ಬೆಂಬಲಿಗರು ಜಿರಳೆ ಮುಖವಾಡಗಳನ್ನು ಧರಿಸಿ, ಕೈಯಲ್ಲಿ ಹೂವುಗಳು, ಪುಸ್ತಕಗಳು ಹಾಗೂ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಹಲವಾರು ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಆಗಮಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಸಂಘಟನೆಯ ಸಂಸ್ಥಾಪಕ ಅಭಿಜೀತ್ ದಿಪ್ಕೆ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸುವಂತೆ ಕರೆ ನೀಡಿದ್ದು, ಪೊಲೀಸರಿಗೆ ಹೂವುಗಳನ್ನು ನೀಡಿ ಗೌರವ ಸೂಚಿಸಬೇಕು ಹಾಗೂ ಪ್ರೀತಿ ಮತ್ತು ಶಾಂತಿಯ ಮಾರ್ಗದಲ್ಲಿ ಹೋರಾಟ ನಡೆಸಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದರು.
ಮೊದಲು ಸಂಸತ್ ಮಾರ್ಗ ಪೊಲೀಸ್ ಠಾಣೆಯ ಮುಂದೆ ಸೇರಲು ಬೆಂಬಲಿಗರಿಗೆ ಸೂಚಿಸಲಾಗಿತ್ತು. ಆದರೆ, ನಂತರ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನೇರವಾಗಿ ಅಲ್ಲಿಗೆ ತೆರಳಿದರು.
ಪ್ರತಿಭಟನೆ ವೇಳೆ “ಕಾಕ್ರೋಚ್‌ಗಳು ಬರುತ್ತಿವೆ, ಧರ್ಮೇಂದ್ರ ಪ್ರಧಾನ ಹೊರಟು ಹೋಗುತ್ತಿದ್ದಾರೆ” ಎಂಬ ಘೋಷಣೆಗಳನ್ನು ಕೂಗಲಾಗಿದ್ದು, NEET, CBSE, CUET ಹಾಗೂ SSC ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…