ಚನ್ನೈ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತದ ಅವಧಿಯಲ್ಲಿ ತಮಿಳು ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ನೀಡಿದರು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.
ಚೆನ್ನೈನಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಸ್ಮರಣಾರ್ಥ ಸಭೆಯಲ್ಲಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ಜನರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿ ಮಾಡಿದರು. ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ಸಚಿವರಾಗಿ ಅವರು ರೂಪಿಸಿದ ಆರ್ಥಿಕ ನೀತಿಗಳು ದೇಶದ ಬೆಳವಣಿಗೆಗೆ ಆಧಾರವಾಗಿವೆ ಎಂದು ಹೇಳಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಈರೋಡ್ ವೆಂಕಟ ಕೃಷ್ಣಸ್ವಾಮಿ ಸಂಪತ್ ಇಳಂಗೋವನ್ ಅವರನ್ನು ಸ್ಮರಿಸಿದ ಸ್ಟಾಲಿನ್, ಇಬ್ಬರು ಪ್ರಮುಖ ನಾಯಕರನ್ನು ಕಳೆದುಕೊಂಡು ದೇಶಕ್ಕೆ ಅಪಾರ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.