ದೇಶ- ವಿದೇಶ

ಮನಮೋಹನ್‌ ಸಿಂಗ್‌ ಆಡಳಿತದ ಅವಧಿಯಲ್ಲಿ ತಮಿಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ: ಎಂ.ಕೆ.ಸ್ಟಾಲಿನ್‌

ಚನ್ನೈ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಆಡಳಿತದ ಅವಧಿಯಲ್ಲಿ ತಮಿಳು ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ನೀಡಿದರು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದ್ದಾರೆ.

ಚೆನ್ನೈನಲ್ಲಿ ತಮಿಳುನಾಡು ಕಾಂಗ್ರೆಸ್‌ ಸಮಿತಿ ಆಯೋಜಿಸಿದ್ದ ಸ್ಮರಣಾರ್ಥ ಸಭೆಯಲ್ಲಿ ಮನಮೋಹನ್‌ ಸಿಂಗ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಮನಮೋಹನ್‌ ಸಿಂಗ್‌ ಅವರು ಜನರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳನ್ನು ಜಾರಿ ಮಾಡಿದರು. ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ಸಚಿವರಾಗಿ ಅವರು ರೂಪಿಸಿದ ಆರ್ಥಿಕ ನೀತಿಗಳು ದೇಶದ ಬೆಳವಣಿಗೆಗೆ ಆಧಾರವಾಗಿವೆ ಎಂದು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಈರೋಡ್‌ ವೆಂಕಟ ಕೃಷ್ಣಸ್ವಾಮಿ ಸಂಪತ್‌ ಇಳಂಗೋವನ್‌ ಅವರನ್ನು ಸ್ಮರಿಸಿದ ಸ್ಟಾಲಿನ್‌, ಇಬ್ಬರು ಪ್ರಮುಖ ನಾಯಕರನ್ನು ಕಳೆದುಕೊಂಡು ದೇಶಕ್ಕೆ ಅಪಾರ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

6 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

20 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

37 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

52 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago