ನವದೆಹಲಿ: ಮರಾಠಿ, ಅಸ್ಸಾಮಿ,ಪಾಲಿ,ಪ್ರಾಕೃತ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ(ಅ.3) ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧರ ತೆಗೆದುಕೊಳ್ಳಲಾಗಿದೆ.
ನಮ್ಮ ಭಾಷೆ, ಸಂಸ್ಕೃತಿ ಹೊಂದಿರುವ ಶ್ರೀಮಂತ ಪರಂಪರೆಯ ಬಗ್ಗೆ ಮೋದಿ ಅವರಿಗೆ ಹೆಮ್ಮೆ ಇದೆ. ಹೀಗಾಗಿ ಇಂತಹ ಚಾರಿತ್ರಿಕ ನಿರ್ಧಾರಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ತಿಳಿಸಿದ್ದಾರೆ.
ಭಾರತ ಸರ್ಕಾರವು ಅ.12, 2004 ರಂದು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡಲು ನಿರ್ಧರಿಸಿತ್ತು.
ಮೊದಲನೆಯದಾಗಿ ತಮಿಳು, ಬಳಿಕ ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಆ ಭಾಷೆಗಳೂ ಶಾಸ್ತ್ರೀಯ ಸ್ಥಾನಮಾನವನ್ನು ಪಡೆದಿದ್ದೇವೆ.
ವರ್ಷಾಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹೊತ್ತಲ್ಲೇ ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿರುವುದು ರಾಜಕೀಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗಿದೆ.