ಶಿಮ್ಲಾ: ದೇಶದ್ಯಾಂತ ಭಾರಿ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಶಿಮ್ಲಾದಿಂದ 100ಕಿ.ಮೀ ದೂರದಲ್ಲಿರುವ ರಾಂಪುರದ ಝಖಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.
ಸದ್ಯ ಸ್ಥಳಕ್ಕೆ ಆಗಮಿಸಿರು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಇಲ್ಲಿ ಒಟ್ಟು 30ಮಂದಿ ನಾಪತ್ತೆಯಾಗಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಎನ್‌ಡಿಆರ್‌ಎಫ್, ರಕ್ಷಣಾ ತಂಡ ಹಾಗೂ ಪೊಲೀಸರನ್ನು ಕಳುಹಿಸಿದ್ದೇವೆ, ಹಲವೆಡೆ ರಸ್ತೆಗಳು ಕೊಚ್ಚಿಹೋಗಿದ್ದು, ಜಲವಿದ್ಯುತ್ ಸ್ಥಾವರಕ್ಕೂ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ತಂಡ, ಇಂಡೋ-ಟಿಬೆಟಿನ್ ಗಡಿ ಪೊಲೀಸ್ ಹಾಗೂ ಗೃಹ ರಕ್ಷಕ ದಳ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ.
ಕಾಣೆಯಾದ ಜನರ ಪತ್ತೆಗೆ ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…