ದೇಶ- ವಿದೇಶ

ಶಿಮ್ಲಾದಲ್ಲಿ ಮೇಘಸ್ಪೋಟ: 30ಕ್ಕೂ ಅಧಿಕ ಮಂದಿ ನಾಪತ್ತೆ

ಶಿಮ್ಲಾ: ದೇಶದ್ಯಾಂತ ಭಾರಿ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಶಿಮ್ಲಾದಿಂದ 100ಕಿ.ಮೀ ದೂರದಲ್ಲಿರುವ ರಾಂಪುರದ ಝಖಾರಿ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ.

ಸದ್ಯ ಸ್ಥಳಕ್ಕೆ ಆಗಮಿಸಿರು ಜಿಲ್ಲಾಧಿಕಾರಿ ಅನುಪಮ್‌ ಕಶ್ಯಪ್‌ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಇಲ್ಲಿ ಒಟ್ಟು 30ಮಂದಿ ನಾಪತ್ತೆಯಾಗಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಎನ್‌ಡಿಆರ್‌ಎಫ್‌, ರಕ್ಷಣಾ ತಂಡ ಹಾಗೂ ಪೊಲೀಸರನ್ನು ಕಳುಹಿಸಿದ್ದೇವೆ, ಹಲವೆಡೆ ರಸ್ತೆಗಳು ಕೊಚ್ಚಿಹೋಗಿದ್ದು, ಜಲವಿದ್ಯುತ್‌ ಸ್ಥಾವರಕ್ಕೂ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್‌ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ತಂಡ, ಇಂಡೋ-ಟಿಬೆಟಿನ್‌ ಗಡಿ ಪೊಲೀಸ್ ಹಾಗೂ ಗೃಹ ರಕ್ಷಕ ದಳ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿವೆ.

ಕಾಣೆಯಾದ ಜನರ ಪತ್ತೆಗೆ ಡ್ರೋನ್‌ಗಳನ್ನು ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

54 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

56 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

1 hour ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

1 hour ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

1 hour ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago