Mysore
24
broken clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ದೆಹಲಿ ಸಿಎಂ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ!

ನವದೆಹಲಿ: ದೆಹಲಿ ಮಧ್ಯನೀತಿ ಹಗರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್.‌23ರವರೆಗೆ ವಿಸ್ತರಿಸಿದೆ.

ಸೋಮವಾರ ಅರವಿಂದ್ ಕೇಜ್ರಿವಾಲ್ ಆಘಾತದ ಮೇಲೆ ಆಘಾತ ಎದುರಿಸಿದರು. ಮೊದಲು ಸುಪ್ರೀಂಕೋರ್ಟ್​ ಕೇಜ್ರಿವಾಲ್ ಗೆ ರಿಲಿಫ್‌ ನೀಡಲು ನಿರಾಕರಿಸಿ ಏಪ್ರಿಲ್ 29ಕ್ಕೆ ಮುಂದೂಡಿತು. ನಂತರ ಅರ್ಧ ಗಂಟೆ ಬಳಿಕ ದೆಹಲಿ ಕೋರ್ಟ್​ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್​ 23ರವರೆಗೆ ವಿಸ್ತರಿಸಿತು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಮಾತನಾಡಿ ಭಾವುಕರಾದರು. ಅವರ ಕಣ್ಣುಂಚಿನಲ್ಲಿ ನೀರು ತುಂಬಿ ಬಂದವು.

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಇದೆ ಎನ್ನುವುದಕ್ಕೆ, ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕೋರ್ಟ್ ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

Tags:
error: Content is protected !!