ನವದೆಹಲಿ: ದೆಹಲಿ ಮಧ್ಯನೀತಿ ಹಗರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್.23ರವರೆಗೆ ವಿಸ್ತರಿಸಿದೆ.
ಸೋಮವಾರ ಅರವಿಂದ್ ಕೇಜ್ರಿವಾಲ್ ಆಘಾತದ ಮೇಲೆ ಆಘಾತ ಎದುರಿಸಿದರು. ಮೊದಲು ಸುಪ್ರೀಂಕೋರ್ಟ್ ಕೇಜ್ರಿವಾಲ್ ಗೆ ರಿಲಿಫ್ ನೀಡಲು ನಿರಾಕರಿಸಿ ಏಪ್ರಿಲ್ 29ಕ್ಕೆ ಮುಂದೂಡಿತು. ನಂತರ ಅರ್ಧ ಗಂಟೆ ಬಳಿಕ ದೆಹಲಿ ಕೋರ್ಟ್ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತು.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ತಿಹಾರ್ ಜೈಲಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಮಾತನಾಡಿ ಭಾವುಕರಾದರು. ಅವರ ಕಣ್ಣುಂಚಿನಲ್ಲಿ ನೀರು ತುಂಬಿ ಬಂದವು.
ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಇದೆ ಎನ್ನುವುದಕ್ಕೆ, ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಚುನಾವಣೆಯ ಹೊಸ್ತಿಲಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಂಧಿಸಲಾಗಿದೆ ಎನ್ನುವ ಕೇಜ್ರಿವಾಲ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಕೋರ್ಟ್ ಅರ್ಜಿದಾರರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಚುನಾವಣಾ ಕಾಲವೋ ಇಲ್ಲವೋ ಆದರೆ, ಕಾನೂನು ಪ್ರಕಾರ ಅವರ ಬಂಧನ ಆಗಿದೆ ಎನ್ನುವುದನ್ನು ಮಾತ್ರ ಕೋರ್ಟ್ ಪರಿಗಣಿಸುತ್ತದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…