ನವದೆಹಲಿ: ದೆಹಲಿಯ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಜೂನ್.2) ಮತ್ತೆ ಜೈಲಿಗೆ ಶರಣಾಗಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಅವರ ಜಾಮೀನು ಅವಧಿ ಜೂನ್.1ಕ್ಕೆ ಮುಕ್ತಾಯವಾದ ಹಿನ್ನಲೆ ಇಂದು (ಭಾನುವಾರ) ತಿಹಾರ್ ಜೈಲಿಗೆ ತೆರಳಿ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಇನ್ನು ಅವರು ಇಂದು ತಿಹಾರ್ ಜೈಲಿಗೆ ತೆರಳುವ ಮುನ್ನಾ ಎಎಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ನಾನು ಭ್ರಷ್ಟಾಚಾರಕ್ಕಾಗಿ ಜೈಲಿಗೆ ಹೋಗುತ್ತಿಲ್ಲ. ಬದಲಾಗಿ ಸರ್ವಾಧಿಕಾರತ್ವದ ವಿರುದ್ಧ ಧನಿ ಎತ್ತಿದ್ದಕ್ಕಾಗಿ ಜೈಲಿಗೆ ಹೋಗುತ್ತಿದ್ದೇನೆ. ಸುಪ್ರೀಂ ಕೋರ್ಟ್ ನನಗೆ 21 ದಿನಗಳ ಗಡುವು ನೀಡಿತ್ತು. ನಾನು ಇದರಲ್ಲಿ ಒಂದು ದಿನವನ್ನು ವ್ಯರ್ಥ ಮಾಡಿಲ್ಲ. ದೇಶದ ಉಳಿವಿಗಾಗಿ ಪ್ರಚಾರ ಮಾಡಿದ್ದೇನೆ.
ನನಗೆ ಪಕ್ಷಕ್ಕಿಂತ ದೇಶ ಮುಖ್ಯ ಎಂದು ಹೇಳಿದ ಅವರು, ಎಕ್ಸಿಟ್ ಪೋಲ್ಸ್‌ಗಳ ಸಮೀಕ್ಷೆಗಳೆಲ್ಲಾ ನಕಲಿ ಎಂದು ವ್ಯಂಗ್ಯವಾಡಿದರು.
ರಾಜ್‌ಘಟ್‌ನ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದ ಬಳಿಕ ಕನ್ನಾಟ್‌ನ ಹನುಮಾನ್ ದೇವಾಲಯಕ್ಕೆ ಪೂಜೆ ಸಲ್ಲಿಸಿದ ಸಿಎಂ ಕೇಜ್ರಿವಾಲ್ ಅಲ್ಲಿಂದ ತಿಹಾರ್ ಜೈಲಿಗೆ ಹೋಗಿ ಅಧಿಕಾರಿಗಳ ಮುಂದೆ ಶರಣಾದರು.
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…