ನವದೆಹಲಿ: ದೆಹಲಿ ಸಿಎಂ ಆಗಿ ಎಎಪಿ ಪಕ್ಷದ ನಾಯಕಿ ಅತಿಶಿ ಮರ್ಲೇನಾ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ ಕುರ್ಚಿಯಲ್ಲಿ ಕೂರದೇ ಬೇರೊಂದು ಕುರ್ಚಿಯನ್ನು ತರಿಸಿಕೊಂಡು ಅಧಿಕಾರ ಸ್ವೀಕರಿಸುವ ಮೂಲಕ ತಮ್ಮ ಗುರು ಕೇಜ್ರಿವಾಲ್‌ಗೆ ಗೌರವ ತೋರಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಹಿಂದೂ ಕಾವ್ಯ ರಾಮಾಯಣದಲ್ಲಿ ಬರುವಂತೆ ಶ್ರೀರಾಮನು ವನವಾಸಕ್ಕೆ ಹೋದಾಗ ಅವರ ಅನುಪಸ್ಥಿತಿಯಲ್ಲಿ ಸಿಂಹಾಸನದಲ್ಲಿ ರಾಮನ ಪಾದುಕೆಯಿಟ್ಟು ಆಳ್ವಿಕೆ ಮಾಡಿದಂತೆಯೇ, ನಾನು ದೆಹಲಿ ಸಿಎಂ ಆಗಿ ಆಳ್ವಿಕೆ ಮಾಡುತ್ತೇನೆ. ಅಂದಿನ ಕಾಲದಲ್ಲಿ ಭರತ ಆಡಳಿತ ನಡೆಸಿದರೆ, ಇಂದಿನ ಭಾರತದಲ್ಲಿ ನಾನು ಮುಂಬರುವ ಚುನಾವಣೆಯವರೆಗೂ ಅಂದರೆ 4 ತಿಂಗಳವರೆಗೆ ಸರ್ಕಾರವನ್ನು ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ದೆಹಲಿ ಕುರ್ಚಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸೇರಿದ್ದು, ದೆಹಲಿಯಲ್ಲಿ ಮುಂಬರುವ ಚುನಾವಣೆಯಲ್ಲಿ ಕೇಜ್ರಿವಾಲ್ ಅವರನ್ನು ಸಾರ್ವಜನಿಕರು ಮತ್ತೊಮ್ಮೆ ಚುನಾಯಿಸಿ ಜನಪ್ರತಿನಿಧಿಯಾಗಿ ಆಯ್ಕೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…