ನವದೆಹಲಿ: ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಶನಿವಾರ(ಜ.18) ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಬೆಂಬಲಿಗರು ದಾಳಿ ನಡೆಸಿದ್ದಾರೆ. ಈ ಕಾರಣಕ್ಕೆ ಕೇಜ್ರಿವಾಲ್ ಅವರ ಹತ್ಯೆಗೆ ಬಿಜೆಪಿಗೆ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಪಕ್ಷದ ವಿರುದ್ಧ ದೆಹಲಿ ಸಿಎಂ ಅತಿಶಿ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಇಂದು(ಜನವರಿ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲೆಂದು ಗೂಂಡಾಗಳನ್ನು ಕಳುಹಿಸಿರುವುದು ಸ್ಪಷ್ಟವಾಗಿ ತಿಳಿಯುತ್ತಿದೆ. ಕೇಜ್ರಿವಾಲ್ ಅವರ ಕಾರಿನ ಮೇಲೆ ನಡೆದ ದಾಳಿಯಲ್ಲಿ ತೊಡಗಿದ್ದ ರೋಹಿತ್ ತ್ಯಾಗಿ ಎಂಬಾತ ಬಿಜೆಪಿಯೂ ಅಭ್ಯರ್ಥಿ ಪರ್ವೇಶ್ ವರ್ಮಾ ಅವರೊಂದಿಗೆ ಇರುತ್ತಿದ್ದ ಎಂದು ವಾಗ್ದಾಳಿ ನಡೆಸಿದರು.
ಪರ್ವೇಶ್ ವರ್ಮಾ ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇಜ್ರಿವಾಲ್ ವಿರುದ್ಧ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇನ್ನೂ ಈತ ಒಬ್ಬ ಕ್ರಿಮಿನಲ್ ಆಗಿದ್ದು, 2011ರಲ್ಲಿ ಕಳ್ಳತನ ಹಾಗೂ ಹತ್ಯೆ ಪ್ರಯತ್ನದ ಆರೋಪಗಳಿವೆ. ಆದಾಗ್ಯೂ ಕೇಜ್ರಿವಾಲ್ ವಿರುದ್ಧ ದಾಳಿ ಮಾಡಿದ್ದ ವೇಳೆ ಮೂವರು ಸ್ಥಳೀಯರು ಗಾಯಗೊಂಡಿದ್ದಾರೆ. ಅಲ್ಲದೇ ದಾಳಿ ನಡೆದ ಸ್ಥಳದಲ್ಲಿದ್ದ ವ್ಯಕ್ತಿ ಸುಮಿತ್ ಎಂಬಾತನ ಮೇಲೂ ಕಳ್ಳತನದ ಆರೋಪವಿದೆ. ಹೀಗಾಗಿ ಈ ಎಲ್ಲಾ ಘಟನೆಗಳನ್ನು ಹೋಲಿಕೆ ಮಾಡಿ ನೋಡಿದರೆ ಬಿಜೆಪಿಯ ಗೂಂಡಾಗಳು ಕೇಜ್ರಿವಾಲ್ ವಿರುದ್ಧ ದಾಳಿ ನಡೆಸಿ, ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಕಿಡಿಕಾರಿದರು.